Kundapra.com ಕುಂದಾಪ್ರ ಡಾಟ್ ಕಾಂ

ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಬಿತ್ತು ಚಪ್ಪಲಿ ಏಟು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜೂ.09:
ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಚಪ್ಪಲಿ ಏಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ವಕ್ವಾಡಿ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿರುವ ಬಾರ್ಕೂರಿನ ನಜೀರ್ (35) ಆರೋಪಿ.

ತಾಲೂಕಿನ ಬಿಜಾಡಿ – ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯೊಬ್ಬಳ್ಳು ಕಾಲೇಜಿಗೆ ತೆರಳುತ್ತಿದ್ದ ಸಂದರ್ಭ ಹಿಂಬಾಲಿಸಿ ಬಂದ ಆರೋಪಿ ನಜೀರ್ ಆಕೆಗೆ ಕಿರುಕುಳ ನೀಡಿ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.

ಈ ವೇಳೆ ವಿದ್ಯಾರ್ಥಿನಿ ಕೂಗಿದ್ದನ್ನು ಕೇಳಿ ಕೂಡಲೇ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿಬಂದು ಆರೋಪಿಯನ್ನು ಹಿಡಿದುಕೊಂಡಿದ್ದು ವಿಚಾರಿಸಿದಾಗ ವಿದ್ಯಾರ್ಥಿನಿ‌ ನಡೆದ ಘಟನೆ ವಿವರಿಸಿದ್ದಾಳೆ. ನೊಂದ ವಿದ್ಯಾರ್ಥಿನಿ ಆರೋಪಿ ನಜೀರನಿಗೆ ಚಪ್ಪಲಿ ಏಟು ನೀಡಿದ್ದು ಸ್ಥಳೀಯರು ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version