ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಿಲ್ಲೆಯ ಮೂವರು ಶಾಸಕರು ಉಡುಪಿಯ ಸರಕಾರಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ, ಜಿಲ್ಲೆಯ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರು ಒಟ್ಟಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು.