Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ ಕಡಲಕೊರೆತಕ್ಕೆ ಆದ್ಯತೆ ಮೇರೆಗೆ ಶಾಶ್ವತ ಪರಿಹಾರ ಒದಗಿಸಲು ಕ್ರಮ: ಸಂಸದ ಬಿ.ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮರವಂತೆ ಕಡಲ ಕೋರೆತದಿಂದಾಗಿ ಮೀನುಗಾರಿಕಾ ರಸ್ತೆ, ಮನೆಗಳಿಗೆ ಹಾನಿಯಾಗಿರುವ ಜೊತಗೆ ಮೀನುಗಾರರು ಆತಂಕದಲ್ಲಿ ಬದುಕು ಸ್ಥಿತಿ ಇದೆ. ಆದ್ಯತೆ ಮೇರೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯದ ಮೀನುಗಾರಿಕಾ ಸಚಿವರಿಗೂ ಮನವಿ ಮಾಡಲಾಗಿದೆ. ಜು.26ರಂದು ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಲಿದ್ದಾರೆ ಎಂದು ಸಂಸದ ಬಿ.ವೈ. ರಾಗವೇಂದ್ರ ಹೇಳಿದರು.

ಅವರು ಶುಕ್ರವಾರ ಮರವಂತೆ ಸಮುದ್ರ ತೀರಕ್ಕೆ ಭೇಟಿ ನೀಡಿ ತೌಕ್ತೇ ಚಂಡಮಾರುತದಿಂದ ಉಂಟಾಗಿರುವ ಹಾನಿಯ ಹಾಗೂ ಕಡಲ ಕೊರೆತದ ಬಗ್ಗೆ ಪರಿಶೀಲನೆ ನಡೆಸಿ ಬಳಿಕ ಮಾತನಾಡಿ, ಹಾನಿಯ ಬಗ್ಗೆ ತಕ್ಷಣ ಪರೀಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ► ಕಡಲ್ಕೊರೆತದಿಂದಾಗಿ ಮರವಂತೆ ಫಿಷರೀಸ್ ರಸ್ತೆಯಲ್ಲಿ ಕಾಣಿಸಿಕೊಂಡ ಬಿರುಕು – https://kundapraa.com/?p=67133 .

ಮರವಂತೆ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 54 ಕೋಟಿ ವೆಚ್ಚ ಮಾಡಲಾಗಿತ್ತು. ಮುಂದುವರಿದ ಕಾಮಗಾರಿಗೆ 80 ಕೋಟಿ ಟೆಂಡರ್ ಆಗಿದ್ದು, ಆದಷ್ಟು ಶೀಘ್ರ ಹಣ ಬಿಡುಗಡೆ ಮಾಡುವಂತೆ ಎಂದು ರಾಜ್ಯ ಸರಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು. ಸರಕಾರ ಬದಲಾಗಿರಬಹುದು ಆದರೆ ಅಭಿವೃದ್ಧಿಯ ವಿಚಾರದಲ್ಲಿ ರಾಜ್ಯ ಸರಕಾರದ ಸಹಕಾರ ನೀಡುವ ಭರವಸೆ ಇದೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ, ಮೀನುಗಾರಿಕಾ ಇಲಾಖಾ ಅಧಿಕಾರಿಗಳು, ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ► ಸಾರ್ವಜನಿಕ ಸಂಪರ್ಕ ಅಭಿಯಾನ ಮತ್ತು ವರ್ತಕರ ಸಭೆ – https://kundapraa.com/?p=67320 .

Exit mobile version