Kundapra.com ಕುಂದಾಪ್ರ ಡಾಟ್ ಕಾಂ

ಸೈಂಟ್ ಮೇರಿ ಪಿಯು ಕಾಲೇಜು: ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಸಂತಮೆರಿ ಪದವಿ ಪೂರ್ವ ಕಾಲೇಜಿನಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ಖ್ಯಾತ ಮನೋರೋಗ ವೈದ್ಯರಾದ ಪ್ರಕಾಶ್ ತೋಳಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸು ತುಂಬಾ ಪ್ರಾಮುಖ್ಯವಾದುದು. ಈ ಮಾದಕ ಸೇವನೆ ತಕ್ಷಣಕ್ಕೆ ಮಾನಸಿಕ ನೆಮ್ಮದಿಯನ್ನು ನೀಡುವುದಾಗಿದ್ದರೂ ನಮ್ಮನ್ನು ಸಮಸ್ಯೆಯ ಸುಳಿಯಲ್ಲಿ ಸಿಲುಕಿಸುತ್ತದೆ ಎನ್ನುತ್ತಾ, ಮಾದಕ ಸೇವನೆಯಿಂದ ನಮ್ಮ ಅಂಗಾಂಗಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೇಷ್ಮಾ ಫೆರ್ನಾಂಡಿಸ್ ರವರು ಅಧ್ಯಕ್ಷ ಸ್ಥಾನ ವಹಿಸಿ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿ, ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ತಿಳಿಸಿದರು. ಉಪ ಪ್ರಾಂಶುಪಾಲರಾದ ಮಂಜುಳಾ ನಾಯರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ ಮಾಡಿಸಲಾಯಿತು. ಪ್ರಾರ್ಥನೆಯಿಂದ ಪ್ರಾರಂಭವಾಗಿ, ವಿದ್ಯಾರ್ಥಿಗಳಾದ ಅಮೃತಾ ಹಾಗೂ ಪ್ರಗತಿ ಕ್ರಮವಾಗಿ ಸ್ವಾಗತಿಸಿ, ವಂದಿಸಿದರು. ನಂದಿತಾ ಹಾಗೂ ಕುಮಾರಿ ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು.

Exit mobile version