Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರಿಂದ ಬಕ್ರೀದ್ ಹಬ್ಬದ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು (ಈದುಲ್ ಅಝಾ) ಇಂದು ಸಂಭ್ರಮ ಸಡಗರದಿಂದ ಆಚರಿಸಿದರು.

ಕುಂದಾಪುರ ಬೈಂದೂರು, ಹೆಬ್ರಿ, ಕಾರ್ಕಳ, ಉಡುಪಿ, ಕಾಪು, ಬ್ರಹ್ಮಾವರ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು

ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಮಸೀದಿಯ ಧರ್ಮಗುರು ಮೌಲಾನಾ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.

ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಿರ್ವಹಿಸಲಾಯಿತು. ನೂರಾರು ಮಂದಿ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು

ಈ ಸಂದರ್ಭದಲ್ಲಿ ಧರ್ಮಗುರುಗಳು ಈದ್ ಸಂದೇಶ ನೀಡಿದರು. ಹಬ್ಬದ ದಿನ ಯಾವುದೇ ಅಹಿತಕರ ಘಟನೆ ನಡೆದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.

Exit mobile version