ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ವಿದ್ಯಾರ್ಥಿನಿ ಪೂರ್ವಿಕಾ, ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಸ್ಪರ್ಧೆಗಳ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಪ್ರಭಾತ್ ಕಲಾವಿದರ ತಂಡ ಗೋಪಿನಾಥ್ ನ್ಯಾಸ-2023 ವತಿಯಿಂದ ಆಯೋಜಿಸಲ್ಪಟ್ಟ ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಸ್ಪರ್ಧೆಗಳ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪರ್ಯಾಯ ಪಾರಿತೋಷಕವನ್ನು ಗಳಿಸಿರುತ್ತಾರೆ.
ಭರತನಾಟ್ಯ ಕಲಾವಿದೆ ಪೂರ್ವಿಕಾ, ಖ್ಯಾತ ಭರತನಾಟ್ಯ ಕಲಾವಿದೆ, ವಿದೂಷಿ ಪ್ರವಿತ ಮತ್ತು ಅಶೋಕ್ ಕುಮಾರ್ ಅವರ ಪುತ್ರಿ. ಪೂರ್ವಿಕಾಳ ಈ ಅಮೋಘ ನೃತ್ಯಸಾಧನೆಯನ್ನು ಕಾಲೇಜಿನ ಸಂಚಾಲಕರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ, ಆಡಳಿತ ಮಂಡಳಿ ಹಾಗೂ ಭೋಧಕ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಇದನ್ನೂ ಓದಿ: ► ಸಂಗೀತದಿಂದ ಸಂಸ್ಕಾರ ಪ್ರಾಪ್ತಿ – ಗುರುಪೂರ್ಣಿಮಾ ಕಾರ್ಯಕ್ರಮದಲ್ಲಿ ಡಾ. ಗೋಪಾಲಕೃಷ್ಣ ಭಟ್ – https://kundapraa.com/?p=67464 .