ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜ.04: ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇನ್ನೂ 5 ದಿನಗಳ ಕಾಲ ನಿರಂತರ ಮಳೆಯಾಗಲಿದೆ. ಜು.5ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ► ಉಡುಪಿ ಜಿಲ್ಲೆ: ಜುಲೈ 05ರಂದು ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ – https://kundapraa.com/?p=67482 .
ಹವಾಮಾನ ಇಲಾಖೆ ಈ ಬಗ್ಗೆ ಮುನ್ಸೂಚನೆ ನೀಡಿದೆ. ಇಂದು ಭಾರಿ ಮಳೆ ಸುರಿಯಲಿದ್ದು, ಜು.5ರಿಂದ 9ರ ತನಕವೂ ಭಾರಿ ಗಾಳಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಜು.3ರಂದು ಜಿಲ್ಲೆಯಲ್ಲಿ ಒಟ್ಟು 70ಮಿ.ಮೀ ಮಳೆಯಾಗಿದೆ. ಕುಂದಾಪುರ ತಾಲೂಕಿನಲ್ಲಿ 64 ಮಿ.ಮೀ, ಬೈಂದೂರು ತಾಲೂಕಿನಲ್ಲಿ 91.6 ಮಿ.ಮೀ, ಬ್ರಹ್ಮಾವರದಲ್ಲಿ 61.8, ಹೆಬ್ರಿ 63ಮಿ.ಮೀ ಮಳೆಯಾಗಿದೆ.