Site icon Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲೆಯಲ್ಲಿ ಭಾರಿ ಮಳೆ: ಸ್ಥಳೀಯ ವಿಪತ್ತು ಪರಿಸ್ಥಿತಿ ಆಧರಿಸಿ ರಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಳೆದೆರಡು ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ರೆಡ್ ಹಾಗೂ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳೀಯ ಮಳೆಯ ಪ್ರಮಾಣ ಹಾಗೂ ವಿಪತ್ತು ಪರಿಸ್ಥಿತಿಯನ್ನು ಆಧರಿಸಿ, ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ತಹಶಿಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ► ಉಡುಪಿ ಜಿಲ್ಲೆ: ಜುಲೈ 05ರಂದು ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ – https://kundapraa.com/?p=67482 .

ಶಿಕ್ಷಣ ಸಂಸ್ಥೆಗಳು ಮಳೆ ವಿಪತ್ತು ಸಂದರ್ಭ ಹಾಜರಾತಿಯನ್ನು ಕಡ್ಡಾಯಗೊಳಿಸುವಂತಿಲ್ಲ. ವಿದ್ಯಾರ್ಥಿಗಳು ತೋಡು ಹಳ್ಳ ದಾಟಿ ಬರುವುದಿದ್ದರೆ ಮನೆಯಲ್ಲಿಯೇ ಉಳಿಯಲು ಸೂಚಿಸುವುದು, ಶಿಥಿಲ ಕಟ್ಟಡವನ್ನು ತರಗತಿ ನಡೆಸಲು ಬಳಸದಿರುವುದು, ನೆರೆ ಪೀಡಿತ ಪ್ರದೇಶದಲ್ಲಿ ಸ್ಥಳೀಯ ರಜೆ ಘೋಷಿಸುವುದು ಹಾಗೂ ರಜೆ ಅವಧಿಯನ್ನು ಶನಿವಾರ ಅಥವಾ ಭಾನುವಾರ ಹೆಚ್ಚುವರಿ ತರಗತಿ ನೀಡಿ ಸರಿದೂಗಿಸುವುದು ಮೊದಲಾದ ಸೂಚನೆಯನ್ನು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ಆದೇಶದಲ್ಲಿ ತಿಳಿಸಿದ್ದಾರೆ.

Exit mobile version