ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರೋಟರಿ ಬಂಧುಗಳು ವಿಶ್ವದ ಸೇವೆಯ ಕೈಂಕರ್ಯವನ್ನು ನಡೆಸುತ್ತಿರುವುದು, ಸ್ವಂತ ದುಡಿಮೆಯ ಒಂದು ಭಾಗವನ್ನು ಸೇವೆಯ ರೂಪದಲ್ಲಿ ವಿನಿಯೋಗಿಸುತ್ತಿರುವುದು ಅಭಿನಂದನೀಯ ಕಾರ್ಯವಾಗಿದೆ ಮಾಜಿ ಜಿಲ್ಲಾ ಗವರ್ನರ್ ರಾಜಾರಾಮ್ ಭಟ್ ಬಿ ಹೇಳಿದರು.
ಅವರು ಯಡ್ತರೆ ಬಂಟರ ಭವನದಲ್ಲಿ ಮಂಗಳವಾರ ಕ್ಲಬ್‌ನ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ನೂತನ ಅಧ್ಯಕ್ಷ ಪ್ರಸಾದ್ ಪ್ರಭು ಅವರಿಗೆ ರೋಟರ್ ಕಾಲರ್ ಹಸ್ತಾಂತರಿಸಿ ಮಾತನಾಡಿದರು. ರೋಟರಿ ಮೂಲಕ ಕೈಗೊಳ್ಳುವ ಎಲ್ಲಾ ಚಟುವಟಿಕೆಗಳಲ್ಲಿ ಸದಸ್ಯರು ಸಕ್ರೀಯವಾಗಿ ಭಾಗವಹಿಸುವುದು ಮುಖ್ಯ. ಆ ನೆಲೆಯಲ್ಲಿ ರೋಟರಿ ಘನತೆಯನ್ನು ಪ್ರತಿ ಸದಸ್ಯರೂ ಅರಿತು ನಡೆಯಬೇಕು ಎಂದರು.
ರೋಟರಿ ಝೋನ್ 1ರ ಸಹಾಯಕ ಗವರ್ನರ್ ಡಾ. ಸಂದೀಪ್ ಶೆಟ್ಟಿ, ವಲಯ ಸೇನಾನಿ ಕೆ. ರಂಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಬೈಂದೂರು ರೋಟರಿ ಕ್ಲಬ್ ನೂತನ ಅಧ್ಯಕ್ಷ ಪ್ರಸಾದ್ ಪ್ರಭು ಅಧ್ಯಕ್ಷತೆ ವಹಿಸಿದ್ದರು.
ಐವರು ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ಹಸ್ತಾಂತರಿಸಲಾಯಿತು. ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಿ ಸನ್ಮಾನಿಸಲಾಯಿತು. ಜತೀಂದ್ರ ಮರವಂತೆ ಅವರು ಸಂಪಾದಿಸಿದ ರೋಟರಿ ಬುಲೆಟಿನ್ ಬಿಡುಗಡಗೊಳಿಸಲಾಯಿತು. ಕ್ಲಬ್ಬಿಗೆ ಇಬ್ಬರು ಹೊಸ ಸದಸ್ಯರು ಸೇರ್ಪಡೆಯಾದರು.
ಬೈಂದೂರು ರೋಟರಿ ನಿರ್ಗಮಿತ ಅಧ್ಯಕ್ಷ ಎಚ್. ಉದಯ ಆಚಾರ್ಯ ಸ್ವಾಗತಿಸಿದರು. ನಿರ್ಗಮಿತ ರೋಟರಿ ಕಾರ್ಯದರ್ಶಿ ಸುಧಾಕರ ಪಿ ವಾರ್ಷಿಕ ವರದಿ ವಾಚಿಸಿದರು. ನೂತನ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಉಪ್ಪುಂದ ವಂದಿಸಿದರು. ಮಂಜುನಾಥ ಮಹಾಲೆ ಕಾರ್ಯಕ್ರಮ ನಿರೂಪಿಸಿದರು.
ಇದನ್ನೂ ಓದಿ: ► ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಸಾದ್ ಪ್ರಭು ಆಯ್ಕೆ – https://kundapraa.com/?p=67283 .