Site icon Kundapra.com ಕುಂದಾಪ್ರ ಡಾಟ್ ಕಾಂ

ಕೆರೆಗೆ ಬಿದ್ದು ಮೃತಪಟ್ಟ ವ್ಯಕ್ತಿಯ ಮನೆಗೆ ಶಾಸಕ ಕೊಡ್ಗಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವ ಸಂದರ್ಭ ತಾಲೂಕಿನ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಯಾಡಿ ಗ್ರಾಮದಲ್ಲಿ ಸ್ಕೂಟರ್ ಸಹಿತ ಕೆರೆಗೆ ಬಿದ್ದು ಮೃತಪಟ್ಟ ದಿನಕರ ಶೆಟ್ಟಿ ಮಲ್ಯಾಡಿ ಅವರ ಮನೆಗೆ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿದರು.

ಈ ವೇಳೆ ವೈಯಕ್ತಿಕ ಧನಸಹಾಯ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ಪರಿಹಾರ ಒದಗಿಸಿಕೊಡುವ ಬಗ್ಗೆಯೂ ಭರವಸೆ ನೀಡಿದರು. ಈ ಸಂದರ್ಭ ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಾನಾಡಿ ಸಂಪತ್ ಕುಮಾರ್ ಶೆಟ್ಟಿ. ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಶೆಟ್ಟಿ ಉಳ್ತೂರು, ಸ್ಥಳೀಯರಾದ ಪ್ರಭಾಕರ್ ಶೆಟ್ಟಿ ಮಲ್ಯಾಡಿ, ಗಣೇಶ್ ಶೆಟ್ಟಿ, ಸುಧೀರ್ ಶೆಟ್ಟಿ, ಪ್ರತಾಪ್ ಶೆಟ್ಟಿ ಉಳ್ತೂರು ಹಾಗೂ ಅಂಬರೀಶ್ ಉಪಸ್ಥಿತರಿದ್ದರು.

ಇದನ್ನೂ ಓದಿ:
► ಮಲ್ಯಾಡಿ: ದ್ವಿಚಕ್ರ ವಾಹನ ಸಹಿತ ಕೆರೆಗೆ ಬಿದ್ದು ವ್ಯಕ್ತಿ ಸಾವು – https://kundapraa.com/?p=67497 .

Exit mobile version