Kundapra.com ಕುಂದಾಪ್ರ ಡಾಟ್ ಕಾಂ

ಎಂಐಟಿ ಹೊಸ ಶೈಕ್ಷಣಿಕ ವರ್ಷ ಆರಂಭ – ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರಿಂದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, IAS ಅವರು ಸಮಾರಂಭವನ್ನು ಉದ್ಘಾಟಿಸಿದರು.

ಈ ವೇಳೆ ಅವರು ಮಾತನಾಡಿ ಉಡುಪಿ ಜಿಲ್ಲೆಗೆ ಇನ್ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಫಲಪ್ರದವಾಗಲಿ ಎಂದು ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಮಾಹೆ ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ, ಎಂಐಟಿ ನಿರ್ದೇಶಕ ಕಮಾಂಡರ್ ಡಾ.ಅನಿಲ್ ರಾಣಾ, ಎಂಐಟಿ ಜಂಟಿ ನಿರ್ದೇಶಕ ಡಾ.ಸೋಮಶೇಖರ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಸಹ ನಿರ್ದೇಶಕಿ ಡಾ.ಪೂರ್ಣಿಮಾ ಕುಂದಾಪುರ ಉಪಸ್ಥಿತರಿದ್ದರು.ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಎಸ್ ಮದ್ದೋಡಿ ಉಪಸ್ಥಿತರಿದ್ದರು.

Exit mobile version