Kundapra.com ಕುಂದಾಪ್ರ ಡಾಟ್ ಕಾಂ

ಎಸ್ಎಸ್ಎಲ್‌ಸಿ ಗುಣಾತ್ಮಕ ಫಲಿತಾಂಶದಲ್ಲಿ ಜಿಲ್ಲೆಗೆ ಅಗ್ರಸ್ಥಾನ ಗಳಿಸಿಕೊಂಡ ಮದರ್ ತೆರೇಸಾ ಶಿಕ್ಷಣ ಸಂಸ್ಥೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘ ಉಡುಪಿ, ಕೋಟ ವಿದ್ಯಾ ಸಂಘದ ಆಶ್ರಯದಲ್ಲಿ ಬುಧವಾರ ಉಡುಪಿ ಜಿಲ್ಲಾ ಪ್ರೌಢಶಾಲಾ ಮುಖ್ಯಸ್ಥರ ಜಿಲ್ಲಾ ಮಟ್ಟದ ಸಮ್ಮೇಳನ ಜರುಗಿತು.

ಕಳೆದ 25 ವರ್ಷಗಳಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆ, ಉಡುಪಿ ಜಿಲ್ಲೆಯಲ್ಲಿ ಗುಣಾತ್ಮಕ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿರುವುದನ್ನು ಗುರುತಿಸಿ, ಕಾರ್ಯಕ್ರಮದಲ್ಲಿ ಸಂಸ್ಥೆಯ ಶಮಿತಾ ರಾವ್ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಲಾಯಿತು.

2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100 ಪ್ರತಿಶತ ಫಲಿತಾಂಶ ದಾಖಲಿಸಿರುವ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯು ಉಡುಪಿ ಜಿಲ್ಲೆಯಲ್ಲಿ ಗುಣಾತ್ಮಕ ಫಲಿತಾಂಶದಲ್ಲಿಯೂ ಪ್ರಥಮ ಸ್ಥಾನ ( 95.18%) ಪಡೆದುಕೊಂಡಿತ್ತು. ಪದವಿಪೂರ್ವ ಶಿಕ್ಷಣದಲ್ಲಿಯೂ ಉತ್ತಮ ಫಲಿತಾಂಶ ದಾಖಲಿಸಿದೆ.

ಇದನ್ನೂ ಓದಿ:
► ಎಸೆಸೆಲ್ಸಿ ಫಲಿತಾಂಶ: ಕುಂದಾಪುರ ವಲಯದಲ್ಲಿ ಪ್ರಥಮ ಸ್ಥಾನ ಪಡೆದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ – https://kundapraa.com/?p=66902 .
► ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿನಿ ಅಕ್ಷಿತಾಗೆ ಎಸ್.ಎಸ್.ಎಲ್.ಸಿಯಲ್ಲಿ 6ನೇ ರ್ಯಾಂಕ್ – https://kundapraa.com/?p=66612 .
► ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್: ಎಸ್.ಎಸ್.ಎಲ್.ಸಿಯಲ್ಲಿ ಶೇ100 ಫಲಿತಾಂಶ – https://kundapraa.com/?p=66609 .

ಉಡುಪಿ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ ಮಚ್ಚೇಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳು, ಎಸ್ಸೆಸ್ಸೆಲ್ಸಿ ಅತಿಹೆಚ್ಚು ಅಂಕ ಗಳಿಸಿದ ಉಡುಪಿ ಜಿಲ್ಲೆಯ ಸಾಧಕ ವಿದ್ಯಾರ್ಥಿಗಳು ಹಾಗೂ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಸೇರಿದಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ, ಕಾರ್ಕಳ, ಬೈಂದೂರು ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಜಿಪಂ ಸಿಪಿಓ ಶ್ರೀನಿವಾಸ್, ಉಡುಪಿ ವಿದ್ಯಾಂಗ ಉಪ ನಿರ್ದೇಶಕ ಗಣಪತಿ ಕೆ., ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಜಾಹ್ನವಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ, ರಂಗನಾಥ್, ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರೀವಿಕ್ಷಣಾಧಿಕಾರಿ ಪದ್ಮಾವತಿ, ಬೈಂದೂ ರಿನ ಚಂದ್ರಶೇಖರ ಶೆಟ್ಟಿ, ಕೋಟ ವಿವೇಕ ವಿದ್ಯಾ ಸಂಘದ ಕಾರ್ಯದರ್ಶಿ ರಾಮದೇವ ಐತಾಳ್, ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಕೆ.ಜಗದೀಶ ನಾವಡ, ಉಡುಪಿ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಮತ್ತಿತರರು ಉಪಸ್ಥಿತರಿ ದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಎ. ಶಿವರಾಮ್ ಕಾಠ್ಯಕ್ರಮ ನಿರೂಪಿಸಿದರು.

ಇದನ್ನೂ ಓದಿ:
► ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದ ಮದರ್ ತೆರೆಸಾಸ್ ಪಿಯು ಕಾಲೇಜು ವಿದ್ಯಾರ್ಥಿನಿ ಚಂದ್ರ ಎಸ್.ಕೆ – https://kundapraa.com/?p=66220 .
► ದ್ವಿತೀಯ ಪಿಯು ಫಲಿತಾಂಶ: ಶಂಕರನಾರಾಯಣ ಮದರ್ ತೆರೆಸಾಸ್ ಪಿಯು ಕಾಲೇಜಿಗೆ ಶೇ.100 ಫಲಿತಾಂಶ – https://kundapraa.com/?p=66215 .
► ಶಂಕರನಾರಾಯಣ ಮದರ್ ತೆರೆಸಾ ಪಿಯು ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ – https://kundapraa.com/?p=66523 .

Exit mobile version