Kundapra.com ಕುಂದಾಪ್ರ ಡಾಟ್ ಕಾಂ

ನಿರಂತರ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.24ರಂದು ರಜೆ. ಪರಿಷ್ಕೃತ ಆದೇಶ ಹೊರಡಿಸಿದ ಡಿಸಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜು.23:
ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆ ವ್ಯಾಪ್ತಿಯ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.24ರ ಸೋಮವಾರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ, ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಹರಿವು ಇದ್ದು, ಮುಂದಿನ 24 ಗಂಟೆಯಲ್ಲಿ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲಮೋ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೊಷಿಸಿಲ್ಲ. ಆದರೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಮತ್ತು ಹಳ್ಳ ತೊರೆಗಳನ್ನು ದಾಟಿ ಬರುವ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಇರಲು ಸೂಚಿಸುವುದು, ಶಿಥಿಲ ಕಟ್ಟಡದಲ್ಲಿ ತರಗತಿ ನಡೆಸದಿರುವುದರ ಬಗ್ಗೆ ತಿಳಿಸಿದ್ದಾರೆ.

ಮೊದಲು ಬೈಂದೂರು ತಾಲೂಕಿನ ಶಾಲಾ ಕಾಲೇಜಿಗೆ ಮಾತ್ರ ರಜೆ ಘೋಷಿಸಿ ಆದೇಶಿಸಿದ್ದರು. ಬಳಿಕ ಜಿಲ್ಲೆಗೆ ರಜೆ ಘೋಷಿಸಿ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.

Exit mobile version