Kundapra.com ಕುಂದಾಪ್ರ ಡಾಟ್ ಕಾಂ

ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಭಾರಿ ಮಳೆ: ಇಂದು, ನಾಳೆ ರೆಡ್ ಅಲರ್ಟ್ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.24:
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಸೂಚನೆ ಇದ್ದು, ಸದ್ಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಜುಲೈ 24, 25 ರೆಡ್ ಅಲರ್ಟ್ ಘೋಷಿಸಲಾಗಿದೆ. ಜು.29ರ ತನಕವೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಆರೆಂಟ್ ಅಲರ್ಟ್ ನೀಡಲಾಗಿದೆ. ಇನ್ನು ಬಾಗಲಕೋಟೆ, ಬೆಳಗಾವಿ,ಹವಾರಿ, ಕಲಬುರಗಿ, ಹಾವೇರಿ, ಹಾಸನ ವಿಜಯಪುರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ.24ರಿಂದ 28ರ ತನಕ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಮುಂದಿನ ಒಂದು ವಾರಗಳ ಕಾಲ ದಿನಗಳ ಕಾಲ ಮಳೆ ಅರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಭಾರಿ ಗಾಳಿ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಮನೆ, ಕೊಟ್ಟಿಗೆಗೆ ಹಾನಿ, ಮರ ಬಿದ್ದಿರುವ ಘಟನೆ ನಡೆದಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ನೆರೆ ಭೀತಿ ಇದೆ.

Exit mobile version