Kundapra.com ಕುಂದಾಪ್ರ ಡಾಟ್ ಕಾಂ

ಜಲಪಾತ, ಸಮುದ್ರದ ಬಳಿ ತೆರಳುವುದು ಹಾಗೂ ಪೊಟೋ – ವಿಡಿಯೋ ಚಿತ್ರೀಕರಣಕ್ಕೆ ನಿಷೇಧ ಹೇರಿದ ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವುದರಿಂದ, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ನದಿಗಳು, ಹಳ್ಳ ತೋಡುಗಳು ತುಂಬಿ ಹರಿದು ಅಪಾಯದ ಮಟ್ಟ ತಲುಪಿದೆ.

ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಪಾಯದ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಯಾವುದೇ ಬೀಚ್, ನದಿ ಹಾಗೂ ಜಲಪಾತಗಳ ಬಳಿ ತೆರಳುವುದನ್ನು ಮತ್ತು ಫೋಟೋ – ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಪ್ರವಾಸಿಗರು ಭೇಟಿ ನೀಡಬಹುದಾದ ಸ್ಥಳಗಳಲ್ಲಿ ಅಪಾಯದ ಮುನ್ನೆಚ್ಚರಿಕೆ ವಹಿಸಲು ಎಚ್ಚರಿಕಾ ಫಲಕ, ಪೊಲೀಸ್ ಕಾವಲು ಮೊದಲಾದ ಕ್ರಮಗಳನ್ನು ಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ► ಜುಲೈ 25ರಂದು ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ – https://kundapraa.com/?p=67941 .

Exit mobile version