ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು,ಜು.25: ಮನೆಯಿಂದ ಹೊರಕ್ಕೆ ಹೋಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬೈಂದೂರು ತಾಲೂಕಿನ ಜಡ್ಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಕ್ಕೆ ಕೊಳಕೆಹೊಳೆ ನಿವಾಸಿ ಸುರೇಶ (28) ನಾಪತ್ತೆಯಾದ ಯುವಕ.
ಜುಲೈ 23 ರಂದು ಮನೆಯಿಂದ ಹೊರಗೆ ಹೋಗಿದ್ದ ಸುರೇಶ್ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ಕೊಲ್ಲೂರು ಠಾಣೆಯ ಪಿಎಸ್ಐ ಯುವಕನ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಸ್ಥಳೀಯರು ನೆರೆಯಲ್ಲಿ ಕೊಚ್ಚಿಹೋಗಿರುವ ಅಥವಾ ಕಾಡು ಪ್ರಾಣಿಯಿಂದ ಹಾನಿಗೊಳಗಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆಯ ಮಾಹಿತಿ ಪಡೆದ ಶಾಸಕ ಗುರುರಾಜ ಗಂಟಿಹೊಳೆ ಅವರು ಯುವಕನ ಮನೆಗೆ ಭೇಟಿ ನೀಡಿದ್ದಾರೆ.