Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರದ ನಮೀತಾ ಪಾಯಸ್ ಅವರಿಗೆ ಅಮೇರಿಕಾ ವಿವಿ ಡಾಕ್ಟರೇಟ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರದ ನಿವಾಸಿ, ಪ್ರಸ್ತುತ ಅಮೇರಿಕಾದಲ್ಲಿ ವ್ಯಾಸಂಗ ಮಾಡುತ್ತಿರುವ ನಮೀತಾ ವಿಯೊನ್ನಾ ಪಾಯಸ್ ಅವರ ಸಂಶೋಧನಾ ಪ್ರಬಂಧಕ್ಕೆ ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನಿಸಿದೆ.

ಅವರ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ‘ಮೊಡಲಿಂಗ್ ಆಫ್ ಕ್ರಾಸ್ ಸೆಕ್ಷನಲ್, ರೀಪಿಟೇಡ್ ಮೇಸರ್ಸ್ ಮತ್ತು ಟೈಮ್ ಸೀರಿಸ್ ಡಾಟಾ ಸ್ಟ್ರಚರ್ಸ್’ ವಿಷಯದಲ್ಲಿ ಪಿಎಚ್‌ಡಿ ಅಧ್ಯಯನ ನಡೆಸಿದ್ದರು.

ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯದ ಸಂಖ್ಯಾ ಶಾಸ್ತ್ರ ವಿಭಾಗದ ಸಂಗುತ್ತೇವಾರ್ ರಾಜೇಶೇಖರನ್ ಡಾ.ನಳೀನಿ ರವಿಶಂಕರ ಅವರ ಮಾರ್ಗದರ್ಶನ ಪಡೆದುಕೊಂಡಿರುವ ನಮೀತಾ ಅವರು ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿದ್ದಾರೆ.

ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್, ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜ್ ಹಾಗೂ ಪೂನಾದ ಸಾವಿತ್ರಿ ಬಾಯಿ ಪುಲೆ ವಿಶ್ವವಿದ್ಯಾಲಯದ ಪ್ರಾಕ್ತನ ವಿದ್ಯಾರ್ಥಿನಿಯಾಗಿರುವ ನಮೀತಾ, ಕುಂದಾಪುರದ ಪತ್ರಕರ್ತ, ಉದ್ಯಮಿ ವಿನಯ್ ಎ. ಪಾಯಸ್ ಹಾಗೂ ಜಸಿಂತಾ ವಿ. ಪಾಯಸ್ ಅವರ ಪುತ್ರಿಯಾಗಿದ್ದಾರೆ.

Exit mobile version