Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಕ್ಷೇತ್ರದಲ್ಲಿ ಹೆಚ್ಚಿನ ಮೊಬೈಲ್ ಟವರ್, ರೈಲು ನಿಲುಗಡೆಗಾಗಿ ಸಚಿವರಿಗೆ ಮನವಿ ಮಾಡಿದ ಸಂಸದ ಬಿವೈಆರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಮೊಬೈಲ್ ಟವರ್ ಹಾಗೂ ಹೆಚ್ಚಿನ ರೈಲು ನಿಲುಗಡೆಗೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ದೂರಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಮಂಗಳವಾರ ಭೇಟಿಯಾಗಿ ಮನವಿ ಸಲ್ಲಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಬಿ.ಎಸ್.ಎನ್.ಎಲ್ ಮೊಬೈಲ್ ಟವರ್ ಮಂಜೂರಾತಿಗೆ ಹಾಗೂ ಬೈಂದೂರು, ಶಿರೂರು, ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ರೈಲುಗಳು ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸಂಸದರ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Exit mobile version