Kundapra.com ಕುಂದಾಪ್ರ ಡಾಟ್ ಕಾಂ

ಕರ್ಕಿಕಳಿ ದೋಣಿ ದುರಂತ: ಘಟನಾ ಸ್ಥಳಕ್ಕೆ ಮೀನುಗಾರಿಕಾ ಸಚಿವರು, ಶಾಸಕರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮಂಗಳವಾರ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ಚೆಕ್ ಹಸ್ತಾಂತರಿಸಲಾಗುತ್ತಿದೆ. ಕೊಡೇರಿ ಬಂದರಿನ ಎರಡು ಬದಿಯಲ್ಲಿ 250 ಮೀಟರ್ ಬ್ರೇಕ್ ವಾಟರ್ ವಿಸ್ತರಿಸುವ ಬಗ್ಗೆ ಶಾಸಕರು ಹಾಗೂ ಮಾಜಿ ಶಾಸಕರು ಬೇಡಿಕೆ ಇರಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಅನುಷ್ಠಾನಗೊಳಿಸುವ ಬಗ್ಗೆ ಕ್ರಮವಹಿಸಲಾಗುವುದು ಎಂದರು.

ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಡಿಪಿಆರ್ ತಯಾರು ಮಾಡಲಾಗುತ್ತಿದೆ. ಹಂತಹಂತವಾಗಿ ಕಾಮಗಾರಿ ಮಾಡಲಾಗುವುದು ಆದರೆ ಅದಕ್ಕೂ ಮೊದಲು ಬಂದರು ಬ್ರೇಕ್ವಾಟರ್ ವಿಸ್ತರಣೆ ಕಾಮಗಾರಿಯನ್ನು ಮಾಡಲಾಗುವುದು. ಮರವಂತೆ ಬಂದರಿನಂತೆ ಒಟ್ಟು 28 ಕಾಮಗಾರಿಗಳು ಸಿಆರ್ಝಡ್ ನೆಪವೊಟ್ಟು ಸ್ಥಗಿತಗೊಂಡಿದೆ. ಸಿಆರ್ಝಡ್ ಸಮಸ್ಯೆ ನಿವಾರಿಸಲು ಒಂದು ತಂಡ ರಚಿಸಲಾಗಿದ್ದು, ಮರವಂತೆ ಬಂದರು ಕಾಮಗಾರಿಯೂ ಶೀಘ್ರ ಆರಂಭವಾಗಲಿದೆ. ಎಂದರು.

ಮೃತ ಮೀನುಗಾರರ ಕುಟುಂಬಕ್ಕೆ ಸಂಕಷ್ಟ ಪರಿಹಾರದ ಚೆಕ್‌ ಹಸ್ತಾಂತರಿಸಿದರು. ಈ ವೇಳೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮೀನುಗಾರಿಕಾ ಇಲಾಖಾ ಅಧಿಕಾರಿಗಳು, ಪಿಎಸ್‌ಐ ನಿರಂಜನ್ ಗೌಡ, ಮೀನುಗಾರ ಮುಖಂಡರಾದ ಮದನ್ ಕುಮಾರ್ ಉಪ್ಪುಂದ, ವೆಂಕಟರಮಣ ಖಾರ್ವಿ, ಪ್ರಮುಖರಾದ ಎಸ್. ರಾಜು ಪೂಜಾರಿ, ದೀಪಕ್ ಕುಮಾರ್ ಶೆಟ್ಟಿ , ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬಿ.ಎಸ್. ಸುರೇಶ್ ಶೆಟ್ಟಿ, ರಾಮಚಂದ್ರ ಖಾರ್ವಿ, ಆನಂದ ಖಾರ್ವಿ, ಜಗನ್ನಾಥ ಮೊಗವೀರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

► ಕರ್ಕಿಕಳಿಯಲ್ಲಿ ದೋಣಿ ದುರಂತ: ಘಟನಾ ಸ್ಥಳಕ್ಕೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ – https://kundapraa.com/?p=68142 .

ಕರ್ಕಿಕಳಿಯಲ್ಲಿ ಸಮುದ್ರದಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದು ನಾಗೇಶ್ ಬಾಬು ಖಾರ್ವಿ ಎಂಬುವವರನ್ನು ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸತೀಶ್ ಖಾರ್ವಿ ಎಂಬುವವರು ನಾಪತ್ತೆಯಾಗಿದ್ದು ಮಂಗಳವಾರ ಸಂಜೆಯ ತನಕ ಮೃತದೇಹ ಪತ್ತೆಯಾಗಿರಲಿಲ್ಲ. ಬಂದರು ಠಾಣೆಯ ಪೊಲೀಸರು ಡ್ರೋನ್ ಮೂಲಕವೂ ಪತ್ತೆ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ.

► ಕರ್ಕಿಕಳಿಯಲ್ಲಿ ದೋಣಿ ದುರಂತ: ಓರ್ವ ಮೀನುಗಾರನ ಸಾವು, ಇನ್ನೋರ್ವ ನಾಪತ್ತೆ – https://kundapraa.com/?p=68119 .

Exit mobile version