ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಬಂದರು ಕಾಮಗಾರಿ, ಕೊಡೇರಿ ಕಿರುಬಂದರು ಮಂಜೂರು ಸೇರಿದಂತೆ ಇನ್ನಿತರ ಬೇಡಿಕೆಗೆ ಶೀಘ್ರ ಅನುಮತಿ, ಅನುಮೋದನೆ ನೀಡುವಂತೆ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗರಿಗೆ ರೂ 85.00ಕೋಟಿ ಮಂಜೂರಾಗಿದ್ದು, ಸಿ.ಆರ್.ಝಡ್ ಕ್ಲಿಯರೆನ್ಸ್ ಮಾಡಿ ಆದಷ್ಟು ಬೇಗ ಕಾಮಗಾರಿ ಕೈಗೊಳ್ಳಲು ಅನುಕೂಲ ಮಾಡಿಬೇಕಾಗಿ ಕೋರಿದರು. ಉಪ್ಪುಂದದಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಬ್ರೇಕ್ ವಾಟರ್ ಹಾಗೂ ಕಿರು ಬಂದರು ಮಂಜೂರು ಮಾಡುವಂತೆ ಮನವಿ ಮಾಡಿದರು.
ಬೈಂದೂರಿನಲ್ಲಿ ರೂ 228.78 ಕೋಟಿ ವೆಚ್ಚದಲ್ಲಿ ಮಲ್ಟಿ ಪರ್ಪಸ್ ಹಾರ್ಬಾರ್ ನಿರ್ಮಾಣ ಮಾಡಲು ಖಾಸಗಿ ಸಹಭಾಗಿತ್ವದಲ್ಲಿ ಟೆಂಡರ್ ಕರೆಯಲಾಗಿತ್ತು, ಆದರೆ ಯಾವುದೇ ಕಂಪನಿ ಸದರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ. ಯೋಜನೆಗಳಿಗೆ ಬ್ರೇಕ್ವಾಟರ್ ಮತ್ತು ಬರ್ತಿಂಗ್ ಸೌಲಭ್ಯಗಳ ಮೇಲೆ ಹೆಚ್ಚಿನ ಬಂಡವಾಳ ವೆಚ್ಚದ ಅಗತ್ಯವಿರುವುದರಿಂದ, ಒಟ್ಟು ಯೋಜನಾ ವೆಚ್ಚಕ್ಕೆ PPP ಕಾರ್ಯಸಾಧ್ಯವಾಗುವುದಿಲ್ಲ ಎಂದು ವಿವರಣೆ ನೀಡಿ. ಸದರಿ ಯೋಜನೆಗೆ ರೂ 228.78 ಕೋಟಿ ಅವಶ್ಯಕತೆ ಇದ್ದು ಕೇಂದ್ರ ಸರ್ಕಾರ ಖುದ್ದಾಗಿ ಕೈಗೆತ್ತಿಕೊಳ್ಳಬೇಕೆಂದು ವಿನಂತಿಸಿದರು .
ಸಂಸದರ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಕೇಂದ್ರ ಸಚಿವರು ಕೂಡಲೇ ಅನುಮೋದನೆಯನ್ನು ನೀಡುವುದಾಗಿ ತಿಳಿಸಿದ್ದಾರೆ.