Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ಮಾತನಾಡಿದರು.

ಉಡುಪಿಯ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾಗಿರುವ ಸಿಎ ಗೋಪಾಲಕೃಷ್ಣ ಭಟ್ ಅವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಸಿಎ/ಸಿಎಸ್ ಕೋರ್ಸ್ ಗಳು ಬಹಳಷ್ಟು ಪ್ರಯೋಜನಕಾರಿ,ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಕಲಿಕೆಯ ಜೊತೆ-ಜೊತೆಗೆ ಸಿಎ/ಸಿಎಸ್ ಕೋರ್ಸುಗಳನ್ನು ಅಭ್ಯಾಸ ಮಾಡಿದರೆ ಸಾಕಷ್ಟು ಅವಕಾಶಗಳು ಲಭಿಸುತ್ತವೆ ಎನ್ನುತ್ತಾ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ್ ಪೂಜಾರಿ, ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಈಗಾಗಲೇ ನಡೆದ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ನೀಡಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು.

ಉಪನ್ಯಾಸಕ ಉದಯ್ ನಾಯ್ಕ್ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಅಭಿಜಿತ್ ವಂದಿಸಿದರು.

Exit mobile version