Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ & ಬೈಂದೂರು ತಾಲೂಕು ಆಡಳಿತದಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ/ಬೈಂದೂರು:
ಕುಂದಾಪುರ ಹಾಗೂ ಬೈಂದೂರು ತಾಲೂಕು ಆಡಳಿತದ ವತಿಯಿಂದ ತಾಲೂಕು ಕೇಂದ್ರಗಳಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವ ಆಚರಿಸಿಲಾಯಿತು.

ಕುಂದಾಪುರ ಗಾಂಧಿ ಮೈದಾನದಲ್ಲಿ ಉಪ ವಿಭಾಗಾಧಿಕಾರಿ ರಶ್ಮಿ ಅವರು ಧ್ವಜಾರೋಹಣ ನೆರವೇರಿಸಿದ ಬಳಿಕ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯ ಎಸ್. ಪೂಜಾರಿ, ಕುಂದಾಪುರ ಡಿಎಸ್ಪಿ ಬೆಳ್ಳಿಯಪ್ಪ ಯು.ಕೆ., ಪುರಸಭೆ ಸದಸ್ಯರಾದ ಪ್ರಭಾಕರ ವಿ., ಸಂತೋಷ್ ಶೆಟ್ಟಿ, ಪ್ರಭಾವತಿ ಶೆಟ್ಟಿ, ದೇವಕಿ ಪಿ.ಸಣ್ಣಯ್ಯ, ಶ್ರೀಧರ ಶೇರೆಗಾರ್, ವನಿತಾ ಪೂಜಾರಿ, ಪುರಸಭೆ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ನಾಮನಿರ್ದೇಶಕ ಸದಸ್ಯರಾದ ರತ್ನಾಕರ ಶೇರೆಗಾರ್, ಪುಷ್ಪಾ ಶೇಟ್, ಸಮಾಜ ಕಲ್ಯಾಣಿ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ಆರ್. ವರ್ಣೇಕರ್, ಮುಖ್ಯಾಧಿಕಾರಿ ಮಂಜುನಾಥ ಆರ್., ಉಪತಹಸೀಲ್ದಾರ್ ವಿನಯ್ ಇದ್ದರು.

ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಕುಂದಾಪುರ ವೆಂಕಟರಮಣ ಆಂಗ್ಲಾ ಮಾಧ್ಯಮ ಶಾಲೆ ಲಹರಿ, ವಿಕೆಆರ್ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಆರ್., ಕೆಎಸೆಸ್ ಬಿದ್ಕಲ್ಕಟ್ಟೆ ಕೊರಗ ವಿದ್ಯಾರ್ಥಿ ಸುಜಯ್ ಅವರನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಖಾದ್ಯತೈಲ ಅಭಿಯಾನ ತಾಳೆ ಬೆಳೆ ಯೋಜನೆಯಲ್ಲಿ ಯಡಾಡಿ ಮತ್ಯಾಡಿ ಕೆ.ಸತೀಶ್ ಕೆದ್ಲಾಯ, ಮೊಳಹಳ್ಳಿ ಮಂಜುನಾಥ ಶೆಟ್ಟಿ, ಕಕುಂಜೆ ರಾಜೇಶ್ ಕಾಂಚನ್ ಅವರಿಗೆ ತಾಳೆ ಸಸಿ ವಿತರಿಸಲಾಯಿತು.

ಪ್ರೊಬೇಶನರಿ ಡಿವೈಎಸ್ಪಿ ರವಿ ನೇತೃತ್ವದಲ್ಲಿ ಪೊಲೀಸ್, ಹೋಮ್‌ಗಾರ್ಡ್‌, ಅಗ್ನಿಶಾಮಕ ದಳ, ಸ್ಕೌಟ್ ಗೈಡ್, ಸೇವಾದಳ ಹಾಗೂ ಪುರಸಭೆ ಪೌರ ಕಾರ್ಮಿಕರು ಪಥ ಸಂಚಲನ ನಡೆಸಿದರು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ ಸ್ವಾಗತಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ನಿರೂಪಿಸಿದರು. ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ವಂದಿಸಿದರು.

ಬೈಂದೂರು ಗಾಂಧಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ತಹಶೀಲ್ದಾರ್ ಶ್ರೀಕಾಂತ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ, ತಾಪಂ ಕಾರ್ಯನಿರ್ವಹಣಾಧಿಕಾರಿ ಭಾರತಿ, ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಉಪಸ್ಥಿತರಿದ್ದರು.

ಬೈಂದೂರು ಪಿಎಸ್ೈ ಮಹೇಶ್ ಕಂಬಿ ನೇತೃತ್ವದಲ್ಲಿ ಪೊಲೀಸ್, ಹೋಮ್ಗಾರ್ಡ್, ಅಗ್ನಿಶಾಮಕ ದಳ, ವಿವಿಧ ಶಾಲೆಗಳ ಸ್ಕೌಟ್ ಗೈಡ್, ಸೇವಾದಳ ನೇತೃತ್ವದಲ್ಲಿ ಪಥಸಂಚಲನ, ಗೌರವವಂದನೆ ನಡೆಯಿತು. ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಬೈಂದೂರು ತಾಲೂಕಿನ ವಿದ್ಯಾರ್ಥಿಗಳಾದ ಅಮೂಲ್ಯ, ಸಿಂಚನಾ, ಚೈತ್ರಾ, ಮಹಮ್ಮದ್ ಸಮೀರ್ ಅವರನ್ನು ಸನ್ಮಾನಿಸಲಾಯಿತು.

ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಜಿ. ಸ್ವಾಗತಿಸಿ, ಶಿಕ್ಷಕ ಗಣಪತಿ ಹೋಬಳಿದಾರ್ ವಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Exit mobile version