ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ಕುಂಜೆ ಗ್ರಾಮ ಪಂಚಾಯತ್ ಮುಂದಿನ ಸಾಲಿನ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ರಾಜೀವ ಶೆಟ್ಟಿ ಬಿಜ್ರಿ ಅವಿರೋಧವಾಗಿ ಆಯ್ಕೆಯಾಗಿದ್ದು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಗರತ್ನ ಇವರು ಆಯ್ಕೆಯಾಗಿರುತ್ತಾರೆ.
11 ಸದಸ್ಯ ಬಲದ ಕರ್ಕುಂಜೆ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ದೊರೆತಿತ್ತು.

