ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ, ಉಪ್ಪುಂದ ಇದರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ಆ.17ರಂದು ಸಂಘದ ಆಡಳಿತ ಕಛೇರಿಯಲ್ಲಿ ನಡೆಯಿತು.
ಸಂಘದ ಅಧ್ಯಕ್ಷರಾಗಿ ಮೋಹನ್ ಪೂಜಾರಿ ಉಪ್ಪುಂದ ಹಾಗೂ ಉಪಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಯ ಹತ್ತು ಸ್ಥಾನಗಳಿಗೆ ನಿರ್ದೇಶಕರ ಅವಿರೋಧ ಆಯ್ಕೆಯಾಗಿತ್ತು. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆ ವೇಳೆ ನಿರ್ದೇಶಕರುಗಳಾದ ಸುರೇಶ್ ಪೂಜಾರಿ, ಬಿ. ನಾರಾಯಣ ಪೂಜಾರಿ, ಹೆಚ್. ನರಸಿಂಹ ಪೂಜಾರಿ, ರಾಜು ಪೂಜಾರಿ, ಸಂತೋಷ್, ಮಂಜ ಪೂಜಾರಿ, ಶಾರದಾ, ಲಕ್ಷ್ಮೀ ಹಾಗೂ ಸಂಘದ ಪ್ರಧಾನ ವ್ಯವಸ್ಥಾಪಕ ಮಹೇಶ್ ಹೆಚ್. ಉಪಸ್ಥಿತರಿದ್ದರು.
ಚುನಾವಣಾ ಪ್ರಕ್ರಿಯೆಯನ್ನು ಕಿರಣ್ ಕುಮಾರ್ ಅವರು ನಡೆಸಿಕೊಟ್ಟರು.

