Kundapra.com ಕುಂದಾಪ್ರ ಡಾಟ್ ಕಾಂ

ನಾವುಂದ ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ನರಸಿಂಹ ದೇವಾಡಿಗ, ಉಪಾಧ್ಯಕ್ಷರಾಗಿ ಸುಲೋಚನಾ ಗಾಣಿಗ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ನಾವುಂದ ಗ್ರಾಮ ಪಂಚಾಯತ್ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಸುಲೋಚನಾ ಗಾಣಿಗ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಬೆಂಬಲಿತ 12 ಹಾಗೂ ಬಿಜೆಪಿ ಬೆಂಬಲಿತ 3 ಸದಸ್ಯ ಬಲವಿರುವ ನಾವುಂದ ಪಂಚಾಯತಿಯಲ್ಲಿ, ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು.

ನರಸಿಂಹ ದೇವಾಡಿಗ ಅವರು 5ನೇ ಭಾರಿ ನಾವುಂದ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು, 3ನೇ ಭಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Exit mobile version