Site icon Kundapra.com ಕುಂದಾಪ್ರ ಡಾಟ್ ಕಾಂ

ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿ ಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.

ಎಸ್ಡಿಎಂಸಿ ಅಧಕ್ಷರಾದ ಸುಬ್ರಹ್ಮಣ್ಯ ಪೂಜಾರಿಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಗೆ ಕ್ರೀಡಾ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಸುಭಾಷ್ ಪೂಜಾರಿಯವರನ್ನು ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀಮತಿ ನಾಗವೇಣಿ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಕಾರ್ಯದರ್ಶಿ ಸುಧಾಕರ ಮೊಗವೀರ , ಕೋಶಾಧಿಕಾರಿ ಮಹಾದೇವ ಬಿಲ್ಲವ , ಸಾಂಸ್ಕೃತಿಕ ಕಾರ್ಯದರ್ಶಿ ರವಿ ಗಾಣಿಗ, ಪತ್ರಕರ್ತ ಮಹೇಶ್ ಗಾಣಿಗ ಪ್ರಗತಿಪರ ಕೃಷಿಕ ರಾಜು ಹುಳವಾಡಿ , ಹನುಮಂತ ಶೇರುಗಾರ್ ಹಾಗೂ ಮಾಜಿ ಯೋಧ ವಿಟ್ಟಲ್ ಶೇರುಗಾರ್ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕರಾದ ಮುಕ್ತ ಪಿ. ಪ್ರಸ್ತಾಪಿಸಿ, ಸಹ ಶಿಕ್ಷಕಿ ಮಾಲತಿ ಸ್ವಾಗತಿಸಿದರು. ಸಹ ಶಿಕ್ಷಕಿ ಸಂಗೀತ ವಂದಿಸಿ, ಸಹಶಿಕ್ಷಕಿ ಸಾರಿಕಾ ನಿರೂಪಿಸಿದರು. ಗೌರವ ಶಿಕ್ಷಕಿ ನಾಗರತ್ನ ಸಹಕರಿಸಿದರು.

Exit mobile version