Kundapra.com ಕುಂದಾಪ್ರ ಡಾಟ್ ಕಾಂ

ಚೆಸ್ ಸ್ಪರ್ಧೆ: ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಛಾಯಾ ಸಿ. ಪೂಜಾರಿ ರಾಜ್ಯ ಮಟ್ಟಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪದವಿಪೂರ್ವ ಶಿಕ್ಷಣ ಇಲಾಖೆಯು ಉಡುಪಿಯ ತ್ರಿಷಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಚದುರಂಗ (ಚೆಸ್) ಸ್ಪರ್ಧೆಯಲ್ಲಿ ವಿಜೇತಳಾದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ. ಪೂಜಾರಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version