Kundapra.com ಕುಂದಾಪ್ರ ಡಾಟ್ ಕಾಂ

ಆಲೂರು ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ, ಉಪಾಧ್ಯಕ್ಷೆಯಾಗಿ ಸಿಂಗಾರಿ ತಾರಿಬೇರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಆಲೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರಾಜೇಶ್ ಎಂ. ದೇವಾಡಿಗ ಹಾಗೂ ಉಪಾಧ್ಯಕ್ಷೆಯಾಗಿ ಸಿಂಗಾರಿ ತಾರಿಬೇರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

14 ಸದಸ್ಯ ಬಲದ ಪಂಚಾಯತ್ನಲ್ಲಿ 8 ಮಂದಿ ಕಾಂಗ್ರೆಸ್ ಹಾಗೂ 6 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ.

ಆಲೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗೇಶ್ ನಾಯ್ಕ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಗ್ರಾ.ಪಂ. ಪಿಡಿಒ ರೂಪಾ ಗೋಪಿ ಸಹಕರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಾಬು ಹೆಗ್ಡೆ, ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ, ಉದಯ ಪೂಜಾರಿ, ಗುಂಡು ಪೂಜಾರಿ ಹರವರಿ, ಸುರೇಶ್ ದೇವಾಡಿಗ, ಸದಸ್ಯರು ಉಪಸ್ಥಿತರಿದ್ದರು.

Exit mobile version