Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿಯ ತ್ರಿಷಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರೀತಮ್, 40 ಕೆ.ಜಿ.ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮನ್ ಕೆ.ಎಸ್.58 ಕೆ.ಜಿ.ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ / ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version