Site icon Kundapra.com ಕುಂದಾಪ್ರ ಡಾಟ್ ಕಾಂ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮದರ್ ತೆರೆಸಾದ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪ್ರೌಢಶಿಕ್ಷಣ ಇಲಾಖೆ ಹಾಗೂ ಕುಳ್ಳಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಶಂಕರನಾರಾಯಣ ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮದರ್ ತೆರೆಸದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿವಿಧ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಸಂಸ್ಥೆಯ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ 12 ಪ್ರಥಮ ಬಹುಮಾನವನ್ನು, 14 ದ್ವಿತೀಯ ಬಹುಮಾನವನ್ನು ಹಾಗೂ 9 ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡರು.

ಜಾನಪದ ನೃತ್ಯ ಮತ್ತು ಕವ್ವಾಲಿ ಯಲ್ಲಿ ಪ್ರಥಮ ಬಹುಮಾನವನ್ನು ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆಯುವ ಮೂಲಕ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಅದ್ವಿತೀಯ ಸಾಧನೆಯನ್ನು ಮಾಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಬೋಧಕ ಭೋದಕೇತರ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version