Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ನೂತನ ಪೊಲೀಸ್ ಎಸ್ಪಿಯಾಗಿ ಡಾ. ಅರುಣ್ ಕೆ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಅರುಣ್ ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಕ್ಷಯ್ ಹಾಕಿ ಮಚ್ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಾ. ಅರುಣ್ ಕೆ ಅವರು ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾಗಿ ಕರ್ತವ್ಯದಲ್ಲಿದ್ದರು‌.

ಕರಾವಳಿ ಕಾವಲು ಪೊಲೀಸ್‌ನ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಸಿಟಿ ಸೆಂಟ್ರಲ್ ಡಿವಿಜನ್ ಡಿಸಿಪಿಯಾಗಿ ವರ್ಗಾವಣೆಗೊಳಿಸಿ ಅಂಶು ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

Exit mobile version