ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಭೋಸರಾಜು ಅವರು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ಹುಯ್ಯಾರು ನಿವಾಸಕ್ಕೆ ಭೇಟಿ ನೀಡಿದರು.
ಈ ವೇಳೆ ಅವರು ಸಣ್ಣ ನೀರಾವರಿ ಇಲಾಖೆ ವಿಚಾರ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ. ಕಿಶನ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂ. ದಿನೇಶ ಹೆಗ್ಡೆ, ಮುನಿಯಾಲು ಉದಯ ಕುಮಾರ ಶೆಟ್ಟಿ, ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ ಶೆಟ್ಟಿ ಚೋರಾಡಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.