Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ತಾಲೂಕು ಮಟ್ಟದ ಪಿಯು ಕಾಲೇಜುಗಳ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ತ್ರೋಬಾಲ್ ಪಂದ್ಯಾಟ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜರುಗಿತು.

ಉಡುಪಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಜೀವನ್ ಕುಮಾರ್ ಶೆಟ್ಟಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿ, ತ್ರೋಬಾಲ್ ಪಂದ್ಯಾಟದ ಇಂದಿನ ಗೆಲುವು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಶುಭ ಹಾರೈಸಿದರು.

ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷ ಸ್ಥಾನ ವಹಿಸಿ ಆರೋಗ್ಯ ಸದೃಡವಾಗಲು ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ ಶೆಟ್ಟಿ, ಕುಂದಾಪುರ ತಾಲೂಕು ಕ್ರೀಡಾ ಸಂಘದ ಸಂಯೋಜಕರಾದ ರಾಮ ಶೆಟ್ಟಿ,

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರಾಗಿಣಿ, ವೆಂಕಟರಮಣ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಪ್ರಭಾಕರ್ ಶ್ಯಾನುಭೋಗ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಣಿತ ಶಾಸ್ತ್ರ ಉಪನ್ಯಾಸಕ ಸುಜಯ್ ಕೋಟೆಗಾರ್ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ನ ಉಪನ್ಯಾಸಕಿ ಸೌಮ್ಯ ಕುಂದರ್ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.

Exit mobile version