Kundapra.com ಕುಂದಾಪ್ರ ಡಾಟ್ ಕಾಂ

ಬೆಂಗಳೂರು ಮೈಸೂರು ಮುರ್ಡೇಶ್ವರ ರೈಲಿಗೆ ಕುಂದಾಪುರ, ಬೈಂದೂರಿನಲ್ಲಿ ಸ್ವಾಗತ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಸೆ.17:
ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಮಂಗಳೂರಿಗೆ ಸಂಚರಿಸುತ್ತಿದ್ದ ನಿತ್ಯ ರೈಲು ಮುರ್ಡೇಶ್ವರದವರೆಗೆ ವಿಸ್ತರಣೆಗೊಂಡಿದ್ದು, ಭಾನುವಾರ  ಕುಂದಾಪುರಕ್ಕೆ ಆಗಮಿಸಿದ ಈ ರೈಲಿನ್ನು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ವತಿಯಿಂದ  ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು.

ಕುಂದಾಪುರದ ನಿಲ್ದಾಣದಲ್ಲಿ ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನದ ಮಹಿಳಾ ಚೆಂಡೆ ಬಳಗದ ಚೆಂಡೆ ವಾದನದೊಂದಿಗೆ ರೈಲನ್ನು ಬರಮಾಡಿಕೊಳ್ಳಲಾಯಿತು. ರೈಲಿಗೆ ಹೂವಿನ ಮಾಲೆ ಹಾಕಿ, ಮೈಸೂರು ಸಂಸದ ಪ್ರತಾಪ್ಸಿಂಹ ಅವರಿಗೆ ಕೃತಜ್ಞತೆ ಸಲ್ಲಿಸುವ ಬ್ಯಾನರ್ ಅಳವಡಿಸಲಾಯಿತು.

ಈ ವೇಳೆ ಶಾಸಕ ಕಿರಣ್ ಕೊಡ್ಗಿ ಮಾತನಾಡಿ, ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ದಿನವೇ ಈ ನಿತ್ಯದ ರೈಲು ಆರಂಭಗೊಂಡಿದ್ದು, ಇದು ಈ ಭಾಗದ ಎಲ್ಲ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇದಕ್ಕೆ ಪ್ರಯತ್ನಿಸಿದ ರೈಲು ಪ್ರಯಾಣಿಕರ ಸಮಿತಿ ಹಾಗೂ ಜನಪ್ರತಿನಿಧಿಗಳಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಕುಂದಾಪುರ ರೈಲು ಪ್ರಯಾಣಿಕರ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ಮಾತನಾಡಿ ಈ ರೈಲಿಗೆ ಒಂದು ವರ್ಷದಿಂದ ನಿರಂತರವಾಗಿ ಪ್ರಯತ್ನಿಸಿದ್ದು, ಮೈಸೂರು ಸಂಸದ ಪ್ರತಾಪ್ಸಿಂಹ ಅವರ ಪ್ರಯತ್ನ, ಮಂಗಳೂರು, ಉಡುಪಿ ಸಂಸದರು ಹಾಗೂ ಅನೇಕ ಮಂದಿ ಜನಪ್ರತಿನಿಧಿಗಳ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದರು.

ಕುಂದಾಪುರ ರೈಲು ಪ್ರಯಾಣಿಕರ ಸಮಿತಿ ಸದಸ್ಯರಾದ ಗೌತಮ್ ಶೆಟ್ಟಿ, ವಿವೇಕ್ ನಾಯಕ್ ಮಾತನಾಡಿದರು. ಈ ಸಂದಧದಲ್ಲಿ ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ಜಗದೀಶ್ ಮೊಗವೀರ, ಶ್ರೀನಿವಾಸ ಶೆಟ್ಟಿ, ಸತೀಶ್ ನಾಯಕ, ವರದರಾಜ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ ಮಾರ್ಕೋಡು, ಗೋಪಾಡಿ ಗ್ರಾ.ಪಂ. ಅಧ್ಯಕ್ಷ ಸುರೇಶ್ ಶೆಟ್ಟಿ, ಗ್ರಾ.ಪಂ. ಸದಸ್ಯ ನಾಗರಾಜ ಆಚಾರ್ ಹಂಗಳೂರು, ಬಿಜೆಪಿ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಸುರೇಂದ್ರ ಕಾಂಚನ್, ಕ್ಲೀನ್ ಕುಂದಾಪುರದ ಭರತ್ ಬಂಗೇರ, ಸಮಿತಿಯ ಸದಸ್ಯರಾದ ಕೆಂಚನೂರು ಸೋಮಶೇಖರ್ ಶೆಟ್ಟಿ, ರಾಘವೇಂದ್ರ ಶೇಟ್, ಉದಯ ಭಂಡಾರ್ಕರ್, ಅಭಿಜಿತ್ ಸಾರಂಗ, ಪೃಥ್ವಿ ಕುಂದರ್, ವಿಶಾಲ್ ಶೆನೋಯ್, ಪ್ರವೀಣ್, ಜೋಯ್ ಕರ್ವಾಲೊ, ಸುಧಾಕರ್ ಶೆಟ್ಟಿ, ಯು.ಎಸ್. ಶೇನೋಯ್, ಶ್ರೀ‘ರ್ ಸುವರ್ಣ, ರಾಜೇಶ್, ಪದ್ಮನಾಭ ಶೆನೋಯ್, ರಾಜೇಶ್ ಕಾವೇರಿ, ಚಿಂದಂಬರ್ ಉಡುಪ, ಮತ್ತಿತರರು ಉಪಸ್ಥಿತರಿದ್ದರು.

ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಸದಸ್ಯರು, ರೈಲು ಪ್ರಯಾಣಿಕರು, ಕೋಟೇಶ್ವರ ರೋಟರಿ ಕ್ಲಬ್ ಸದಸ್ಯರು, ರೈಲು ಪ್ರಯಾಣಿಕರು ಸಿಹಿ ಹಂಚಿ ಸಂಭ್ರಮಿಸಿದರು.

ಬೈಂದೂರು ರೈಲ್ವೆ ನಿಲ್ದಾಣದಲ್ಲಿಯೂ ರೈಲನ್ನು ಸ್ವಾಗತಿಸಿಕೊಳ್ಳಲಾಯಿತು. ಈ ವೇಳೆ ಶರತ್ ಶೆಟ್ಟಿ ಉಪ್ಪುಂದ, ಪ್ರಿಯದರ್ಶಿನಿ ಬೆಸ್ಕೂರು, ಪ್ರಜ್ವಲ್ ಶೆಟ್ಟಿ ಕಾಲ್ತೋಡು, ಆಕಾಶ್ ಪೂಜಾರಿ, ಅನುರ್‍ ಮೆಂಡನ್, ಲೋಹಿತ್ ಗಂಟಿಹೊಳೆ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:
► ಕರಾವಳಿಗರ ಅನುಕೂಲಕ್ಕಾಗಿ ಬೆಂಗಳೂರು – ಮುರುಡೇಶ್ವರ ಪ್ರತ್ಯೇಕ ರೈಲು ಆರಂಭಿಸಿ: ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಆಗ್ರಹ – https://kundapraa.com/?p=69060 .

Exit mobile version