Site icon Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನ ಬಾಲಕಿಯರ ಕಬ್ಬಡಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪದವಿಪೂರ್ವ ಶಿಕ್ಷಣ ಇಲಾಖೆಯವರು‌ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕಬ್ಬಡಿ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕನ್ನು ಪ್ರತಿನಿಧಿಸಿದ ಆತಿಥೇಯ ತಂಡವು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನೀಯರಾಗಿ ಹೊರಹೊಮ್ಮುವುದರೊಂದಿಗೆ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಕಳೆದ ಹತ್ತು ವರ್ಷದ ಕಬಡ್ಡಿ ಕ್ರೀಡಾ ಇತಿಹಾಸದಲ್ಲಿ ಕುಂದಾಪುರ ತಾಲೂಕಿನಿಂದ ರಾಜ್ಯಮಟ್ಟಕ್ಕೆ ಅರ್ಹತೆ ಪಡೆದು ಆಯ್ಕೆಯಾದ ಏಕೈಕ ತಂಡ ಎಂಬ ಹೆಗ್ಗಳಿಕೆಯನ್ನೂ ಪಡೆದ ಕೀರ್ತಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಪಾಲಿಗೆ ಸೇರಿದೆ. ಉಡುಪಿ ಜಿಲ್ಲಾಮಟ್ಟದ ಪಂದ್ಯದಲ್ಲಿ ಕುಂದಾಪುರ ತಾಲೂಕನ್ನು ಪ್ರತಿನಿಧಿಸಿದ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿನಿಯರ ಪೈಕಿ 5 ವಿದ್ಯಾರ್ಥಿನಿಯರು ಮುಂದೆ ನಡೆಯುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿ ಅಪ್ರತಿಮ ಸಾಧನೆ ಮೆರೆದಿದ್ದಾರೆ.ವಿದ್ಯಾರ್ಥಿನಿಯರ

ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ ► ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟ – https://kundapraa.com/?p=69068 .

Exit mobile version