Kundapra.com ಕುಂದಾಪ್ರ ಡಾಟ್ ಕಾಂ

ಮಾತೃಭೂಮಿ ಮಹಿಳಾ ಸಹಕಾರ ಸಂಘದ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಬೈಂದೂರು ಇದರ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸದಸ್ಯರ ಸಭೆ ಇತ್ತೀಚೆಗೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷರಾದ ಅನಸೂಯ ಶೇಟ್ ವಹಿಸಿದ್ದರು. ಆಶಾ ಕಿಶೋರ್ ಪ್ರಾರ್ಥಿಸಿದರು.ಸಂಸ್ಥೆಯ ಸಿಬ್ಬಂದಿ ಆಶಾ ಸ್ವಾಗತಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರೆಹನಾ ಸುಲ್ತಾನಾ ಅವರು ಸಂಘದ ವಾರ್ಷಿಕ ವರದಿ, ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು.

ಸಂಸ್ಥೆಯ ಉಪಾಧ್ಯಕ್ಷೆ ಕು. ಆಶಾ, ನಿರ್ದೇಶಕರಾದ ಗೀತಾ. ಎಸ್, ಲಕ್ಷ್ಮೀ ಬೈಂದೂರು, ಗಿರಿಜಾ, ಸಾವಿತ್ರಿ, ಮಾಲತಿ, ಪ್ರೇಮಾ, ಅಂಬಿಕಾ, ಶ್ಯಾಮಲಾ, ಅಲಿಯಾ ನಾಜ್, ನೇತ್ರಾವತಿ, ಸರಳಾ ಮುಂತಾದವರು ಉಪಸ್ಥಿತರಿದ್ದರು.

ಪತ್ರಕರ್ತ ಅಂದಕಾ ಎ.ಎಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version