ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2021 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಮಂಗಳೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ ಅವರು ಆಯ್ಕೆಯಾಗಿದ್ದಾರೆ.
ಮಂಗಳೂರು ವಿಭಾಗದ ಉಪ ವಲಯ ಸಂರಕ್ಷಣಾಧಿಕಾರಿಯಾಗಿದ್ದ ಶ್ರೀಧರ್ ಪಿ ಅವರನ್ನು ಅರಣ್ಯ ರಕ್ಷಣೆ ಮತ್ತು ಅಭಿವೃದ್ಧಿ ವಿಭಾಗದ ಅತ್ಯುತ್ತಮ ಕಾರ್ಯಕ್ಕಾಗಿ 2021ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕಾಗಿ ಆಯ್ಕೆ ಮಾಡಲಾಗಿದೆ. ಮೂಲತಃ ಬೈಂದೂರು ಪಡುವರಿಯವರಾದ ಅವರು ಪ್ರಸ್ತುತ ಅವರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಶುಕ್ರವಾರ ಆಯೋಜಿಸಿದ್ದ “ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ”ದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶ್ರೀಧರ ಪಿ ಅವರಿಗೆ ಪದಕ ಪ್ರದಾನ ಮಾಡಿದರು.