ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಮಣಿಪಾಲ್ ಆರೋಗ್ಯಕಾರ್ಡ್ (MAC) ಪ್ರಾರಂಭಿಸಲಾಗಿದ್ದು ನೊಂದಣಿ ಪ್ರಕ್ರಿಯೆ ಆರಂಭವಾಗಿದೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ಹೇಳಿದರು.
ಅವರು ಕುಂದಾಪುರದಲ್ಲಿ ಜರುಗಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮಣಿಪಾಲ್ ಆರೋಗ್ಯ ಕಾರ್ಡ್ 2023ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 300 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 500/-, ಕುಟುಂಬಕ್ಕೆ ₹ 800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 950/- ಆಗಿರುತ್ತದೆ ಎಂದರು.
ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಈ ಕೆಳಗಿನ ರಿಯಾಯಿತಿ ಸೌಲಭ್ಯ ಪಡೆಯಬಹುದು:
ಹೊರ ರೋಗಿ ವಿಭಾಗದಲ್ಲಿ ಒಳ ರೋಗಿ ವಿಭಾಗದಲ್ಲಿ
• ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇಕಡಾ 50 ರಿಯಾಯಿತಿ
• ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ 30 ರಿಯಾಯಿತಿ
• ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ 20 ರಿಯಾಯಿತಿ
• ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ
• ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ
• ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ
ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಕಾರ್ಡ್ ನೋಂದಾಯಿಸಿದ ಮೊಬೈಲ್ ಸಂಖ್ಯೆಯಿಂದ 8867579797 ಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಣಿ ಮಾಡಿದ ಆರೋಗ್ಯ ಕಾರ್ಡ್ ನ ಮಾಹಿತಿ ಪಡೆಯಬಹುದು. ಕಳೆದ 22 ವರ್ಷಗಳಲ್ಲಿ, ಸಾಮಾಜಿಕ ಕಾಳಜಿಯೊಂದಿಗೆ ನಾವು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದ್ದೇವೆ. ಇತರ ಆಸ್ಪತ್ರೆಗಳ ರಿಯಾಯಿತಿ ಮಾದರಿಗಳನ್ನು ತಿಳಿಯಲು ಮತ್ತು ಹೆಚ್ಚಿನ ವಿವರಗಳನ್ನು www.manipalhealthcard.com ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳಬಹುದು . ಸಾರ್ವಜನಿಕರು ಮಣಿಪಾಲ್ ಆರೋಗ್ಯಕಾರ್ಡ್ ಅನ್ನು ಎಲ್ಲಾ ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ. 9980854700/ 08202923748 ಗೆ ಸಂಪರ್ಕಿಸಬಹುದು
ಪತ್ರಿಕಾಗೋಷ್ಟಿಯಲ್ಲಿ ಮತ್ತು ಮಾರುಕಟ್ಟೆ ವಿಭಾಗದ ಪ್ರತಿನಿಧಿಯಾದ ಅಕ್ಷಯ್ ಕುಮಾರ್, ಭದ್ರಯ್ಯ, ಅನಿಲ್ ಉಪಸ್ಥಿತರಿದ್ದರು.
2023ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ನಾಗರಾಜ – 9916888916, ಭದ್ರಯ್ಯ-9448872666, ಸೈಂಟ್ ಮಿಲಾಗ್ರೇಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್ – 8884459066, ವಂಡ್ಸೆ – ರಕ್ಷಿತ್ ಕುಮಾರ್ – 9743366746, ಕೋಟ ಸಹಕಾರಿ ವ್ಯವಸಾಯಕ ಸಂಘ (ನಿ) (ಎಲ್ಲಾ ಶಾಖೆಗಳು) – 9448761312