Kundapra.com ಕುಂದಾಪ್ರ ಡಾಟ್ ಕಾಂ

ಬ್ರಹ್ಮಾವರದ ಕೋಡಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
2022 – 23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯಿತಿಗೆ ದೊರೆತಿದೆ.

ಗಾಂಧಿ ಜಯಂತಿ ದಿನ ಹಮ್ಮಿಕೊಂಡ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ್ ಮೆಂಡನ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರರಾವ್ ಅವರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು.

ಪ್ರಶಸ್ತಿಯು ಚರಕದ ಸ್ಮರಣಿಕೆ ಪ್ರಶಸ್ತಿ ಪತ್ರ ಹಾಗೂ ಪಂಚಾಯತ್ ಕಾಮಗಾರಿಗೆ 5 ಲಕ್ಷ ರೂಪಾಯಿ ಬಹುಮಾನ ಒಳಗೊಂಡಿದೆ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಪಂಚಾಯತ್ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಮದೇವನ್ ದಲಾದವರು ಉಪಸ್ಥಿತರಿದ್ದರು.

Exit mobile version