ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂದಾವರ ಮೂಡ್ಲಕಟ್ಟೆಯ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆ ಪಿಎಸ್ಐ ಪವನ್ ನಾಯಕ್ ಹಾಗೂ ಸಮುದಾಯ ಮುಖಂಡರ ಉಪಸ್ಥಿತಿಯಲ್ಲಿ ಭಾನುವಾರ ಜರುಗಿತು.

ಈ ಸಂದರ್ಭ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹೇಗೆ ಮತ್ತು ಹೇಗೆ ಯಶಸ್ಸು ಸಾಧಿಸಬಹುದು ಎಂಬ ವಿಷಯದ ಕುರಿತು ಪಿಎಸ್ಐ ಪವನ್ ನಾಯಕ್ ಹಾಗೂ ಸ್ಪರ್ಧಾ ಸಾರಥಿ ಅಕಾಡೆಮಿ ಕುಂದಾಪುರ ಆದರ್ಶ ಕೆಲ ವಿಶೇಷ ಉಪನ್ಯಾಸ ನೀಡಿದರು.