ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘ ರಿ., ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ರಕ್ತ ನಿಧಿ ಕೇಂದ್ರ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ಡಾ.ಬಿ.ಬಿ ಹೆಗ್ಡೆ ಕಾಲೇಜು, ಭಂಡಾಕಾರ್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು, ಶ್ರೀ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇವರ ಸಹಯೋಗದೊಂದಿಗೆ ಅಕ್ಟೋಬರ್ 21ರ ಶನಿವಾರ ಆರ್. ಎನ್ .ಶೆಟ್ಟಿ ಸಭಾಂಗಣದಲ್ಲಿ ಬೃಹತ್ ಮಟ್ಟದ ರಕ್ತದಾನ ಶಿಬಿರ ನೆತ್ತರ ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಸಂಯೋಜಕರಾಗಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಬಿ ಉದಯ್ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

