Kundapra.com ಕುಂದಾಪ್ರ ಡಾಟ್ ಕಾಂ

ಕಸದ ರಾಶಿಯಿಂದಾಗಿ ಗಬ್ಬು ನಾರುತ್ತಿದೆ ಕಳವಾಡಿ ಗ್ರಾಮದ ಕೆರೆ. ಕಣ್ಣು ಮುಚ್ಚಿ ಕುಳಿತ ಪಟ್ಟಣ ಪಂಚಾಯತ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸ್ವಚ್ಛತೆಗಾಗಿ ಒಂದೆಡೆ ನಿರಂತರ ಅಭಿಯಾನಗಳು ನಡೆಯುತ್ತಿದ್ದರೇ, ಇನ್ನೊಂದೆಡೆ ರಸ್ತೆಯ ಇಕ್ಕೆಲಗಳಲ್ಲಿ, ಹೊಳೆ, ಕೆರೆ ಹಾಗೂ ಸಮುದ್ರದ ಬದಿಯಲ್ಲಿ ಅಷ್ಟೇ ಪ್ರಮಾಣದಲ್ಲಿ ಕಸದ ರಾಶಿ ಬೀಳುತ್ತಿರುವುದನ್ನು ಕಾಣುತ್ತಿದ್ದೇವೆ. ಇದಕ್ಕೆ ಕಳವಾಡಿಯ ಈ ಕೆರೆಯೂ ಹೊರತಾಗಿಲ್ಲ.

ಬೈಂದೂರು ಕೊಲ್ಲೂರು 766ಸಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಳವಾಡಿ ಕೆರೆ ಪರಿಸರ ತ್ಯಾಜ್ಯದ ಸುರಿಯುವ ಅಡ್ಡವಾಗಿ ಪರಿಣಮಿಸಿದೆ. ವಾಹನಗಳಲ್ಲಿ ಬರುವ ಸಾರ್ವಜನಿಕರು ತಮ್ಮ ಮನೆಯ ತ್ಯಾಜ್ಯ ,ಕಸಗಳನ್ನ ರಸ್ತೆ ಪಕ್ಕದಲ್ಲಿ ಎಸೆದು ಹೋಗುತ್ತಿದ್ದಾರೆ, ಸ್ಥಳೀಯ ಸಂಘ ಸಂಸ್ಥೆಗಳು ಆಗಾಗ ಸ್ವಚ್ಛತಾ ಅಭಿಯಾನ ನಡೆಸಿ ಕಸವನ್ನು ವಿಲೇವಾರಿ ಮಾಡಿದರೂ ಮತ್ತೆ ಅಲ್ಲಿಯೇ ಕಸ ಎಸೆಯುವ ಪ್ರವೃತ್ತಿ ಹೆಚ್ಚುತ್ತಿದೆ.

ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿ ಕಸ ತುಂಬಿಕೊಂಡಿದ್ದು ಮಳೆಗೆ ಕೊಳೆತು ದುರ್ವಾಸನೆ ಬರುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಹಲವು ವರ್ಷಗಳಿಂದ ಕಸದ ಸಮರ್ಪಕ ವಿಲೇವಾರಿ ಮಾಡಲಾಗಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ಹೀಗೆ ನಿರಂತರವಾಗಿ ಕಸ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳುವುದಲ್ಲದೇ, ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಪಟ್ಟಣ ಪಂಚಾಯತಿಗೆ ಆಗ್ರಹಿಸಿದ್ದಾರೆ

Exit mobile version