ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.

ವಿದ್ಯಾರ್ಥಿ ನಾಯಕ ಕಾರ್ತಿಕ್ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಆಯೋಜಿಸಿದ ವಿವಿಧ ಸ್ಪರ್ಧೆಗಳ ಬಹುಮಾನ ಪ್ರಾಯೋಜಿಸಿದ ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಮಹಾದೇವ .ಎಮ್. ಬಿಲ್ಲವ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಅತ್ತ್ಯುತ್ತಮ ವಿದ್ಯಾರ್ಥಿ ಪುರಸ್ಕಾರ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ಸಾಂಸ್ಕೃತಿಕ ಚಟುವಟಿಕೆ ನಡೆಸಲಾಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಪೂಜಾರಿ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.