Kundapra.com ಕುಂದಾಪ್ರ ಡಾಟ್ ಕಾಂ

ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮವು ನಡೆಯಿತು.

ಶಿಕ್ಷಕರ ಸೇವೆಯನ್ನು ಶ್ಲಾಘಿಸಿದರು ಮತ್ತು ಆರೋಗ್ಯ ಕಾರ್ಡ್ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಗೆ ಸಂಬಂಧಪಟ್ಟಂತೆ ತಲ್ಲೂರು ಶಾಲೆಯೊಂದಿಗೆ ನಾವು ಸದಾ ಜೊತೆಗಿರುತ್ತೇವೆ ಎಂದು ತಿಳಿಸಿದರು.

ಮಣಿಪಾಲ ಆರೋಗ್ಯ ಕಾರ್ಡ್ ಮಾರ್ಕೆಟಿಂಗ್ ಡಿಪಾರ್ಟ್ಮೆಂಟ್ ಸಿಬ್ಬಂದಿಗಳಾದ ಅನಿಲ್, ಮೋಹನ್ ಹಾಗೂ ಅಕ್ಷಯ್, ಮಣಿಪಾಲ್ ಆರೋಗ್ಯ ಕಾರ್ಡ್ ಪ್ರತಿನಿಧಿಯವರಾದ ರಕ್ಷಿತ್ ಕುಮಾರ್ ಶೆಟ್ಟಿ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ಟಿ ಉಪಸ್ಥಿತರಿದ್ದರು.

ಮಾರ್ಕೆಟಿಂಗ್ ವಿಭಾಗದ ಮೋಹನ್ ಅವರು ವಿಶೇಷ ಮಕ್ಕಳ ಪಾಲನೆಯಲ್ಲಿ ತೊಡಗಿರುವ

ಕಳೆದ ಮೂರು ವರ್ಷಗಳಿಂದ ವಿಶೇಷ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಉಚಿತವಾಗಿ ಮಣಿಪಾಲ್ ಹೆಲ್ತ್ ಕಾರ್ಡನ್ನು ವಿತರಿಸುತ್ತಿರುವ ಸಿಬ್ಬಂದಿಗಳಿಗೆ ಸಂಸ್ಥೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಶ್ರುತಿ ಸ್ವಾಗತಿಸಿ,ಶಿಕ್ಷಕಿ ಪ್ರತಿಮಾ ವಂದಿಸಿದರು ಶಿಕ್ಷಕಿ ದೀಪಾ ಕಾರ್ಯಕ್ರಮ ನಿರೂಪಿಸಿದರು.

Exit mobile version