Kundapra.com ಕುಂದಾಪ್ರ ಡಾಟ್ ಕಾಂ

ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನೇಮಕಗೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.

ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ, ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಹಲವು ತಿಂಗಳುಗಳ ಬಳಿಕ ಬಿಜೆಪಿ ಮೇಲ್ಮನೆ ವಿಪಕ್ಷ ಸ್ಥಾನ ಹಾಗೂ ಇನ್ನಿತರ ಹುದ್ದೆಗಳನ್ನು ನೇಮಕ ಮಾಡಿದೆ.

Exit mobile version