Site icon Kundapra.com ಕುಂದಾಪ್ರ ಡಾಟ್ ಕಾಂ

ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು: “ಪಂಚಪ್ರಾಣ್‌ ಪ್ರತಿಜ್ಞಾವಿಧಿ” ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕಾರ್ಕಳ:
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಎನ್.ಎಸ್.ಎಸ್‌ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ “PANCHAPRAN PLEGDE” ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡು, ವಸಾಹತುಶಾಹಿ ಮನಸ್ಥಿತಿಯನ್ನು ಸಂಪೂರ್ಣ ತೊಡೆದು ಹಾಕುವುದರೊಂದಿಗೆ ನಮ್ಮ ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ದೇಶದ ಏಕತೆ ಮತ್ತು ಒಗ್ಗಟ್ಟಿಗೆ ಶ್ರಮಿಸುವುದರೊಂದಿಗೆ ದೇಶಕ್ಕಾಗಿ ಬಲಿದಾನಗೈದ ವೀರಯೋಧರಿಗೆ ಗೌರವ ಸಲ್ಲಿಸುತ್ತಾ ದೇಶ ರಕ್ಷಣೆ ಹಾಗೂ ಪ್ರಗತಿಗೆ ತನ್ನನ್ನು ತಾನು ಸಮರ್ಪಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌, ಎನ್‌.ಎಸ್‌.ಎಸ್‌ ಯೋಜನಾಧಿಕಾರಿಯಾದ ಉಮೇಶ್‌ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Exit mobile version