Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಮುಕ್ತ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಕ್ರಿಕೆಟ್, ಕಬ್ಬಡಿ ಮೊದಲಾದ ಕ್ರೀಡೆಗಳತ್ತ ಕ್ರೀಡಾಪಟುಗಳು ಒಲವು ತೋರುತ್ತಿದ್ದಾರೆ. ವಾಲಿಬಾಲ್ ಮತ್ತಿತರ ಪಂದ್ಯಗಳನ್ನು ಆಡಲು ಕ್ರೀಡಾಪಟುಗಳು ಹೆಚ್ಚಿನ ಆಸಕ್ತಿ ತೋರುತ್ತಿಲ್ಲ. ಯುವ ಜನರು ವಾಲಿಬಾಲ್ ಪಂದ್ಯಾಟಗಳಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು. ಈ ಮೂಲಕ ಈ ಕ್ರೀಡೆಯನ್ನು ಉಳಿಸುವ ಪ್ರಯತ್ನ ನಡೆಸಬೇಕು ಎಂದು ಹಿರಿಯ ವಾಲಿಬಾಲ್ ಆಟಗಾರ ರಾಜೇಶ ಕಾವೇರಿ ಕುಂದಾಪುರ ಹೇಳಿದರು.

ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇದರ ೪೮ನೇ ವಾರ್ಷಿಕೋತ್ಸವದ ಅಂಗವಾಗಿ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಆಯೋಜಿಸಲಾಗಿದ್ದ 18 ವರ್ಷ ವಯೋಮಿತಿಯ ಮುಕ್ತ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿ, ಕೆಲಸ ಮಾಡುತ್ತಿದ್ದು, ಯುವ ಕ್ರೀಡಾಪಟುಗಳನ್ನು ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ 48 ವರ್ಷಗಳಿಂದ ಕ್ರೀಡೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಉಪಯೋಗವಾಗುವಂತಹ ಉತ್ತೇಜಿಸುವ ದೃಷ್ಟಿಯಿಂದ 18 ವರ್ಷ ವಯೋಮಿತಿಯ ವಾಲಿಬಾಲ್ ಪಂದ್ಯಾಟ ಆಯೋಜಿಸುವುದು ಸ್ತುತ್ಯಾರ್ಹವಾದುದು ಎಂದರು.

ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸೊಸೈಟಿ ಅಧ್ಯಕ್ಷ ಎಚ್.ಗಣೇಶ ಕಾಮತ್ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ. ರೋಹಿದಾಸ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಶಶಿಕಾಂತ ಗಂಗೊಳ್ಳಿ ಶುಭಾಶಂಸನೆಗೈದರು. ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಎಸ್.ವಿ. ಶಾಲೆಗಳ ಸಂಚಾಲಕ ಎನ್. ಸದಾಶಿವ ನಾಯಕ್ ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ವಿನಾಯಕ್ ನಾಯಕ್ ವಂದಿಸಿದರು.

Exit mobile version