Site icon Kundapra.com ಕುಂದಾಪ್ರ ಡಾಟ್ ಕಾಂ

ಅಂತರ್ ಕಾಲೇಜು ಲಲಿತಕಲಾ ಸ್ಪರ್ಧೆ: ಬಿ.ಬಿ. ಹೆಗ್ಡೆ ಕಾಲೇಜಿಗೆ ದ್ವಿತೀಯ ಸಮಗ್ರ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮಂಗಳೂರಿನ ಮ್ಯಾಪ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಲಲಿತಕಲಾ ಸ್ಪರ್ಧೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ವೈಯಕ್ತಿಕವಾಗಿ ತೃತೀಯ ಬಿ.ಬಿ.ಎ. ಸ್ವsಸ್ತಿಕ್ ಕಾರ್ಟೂನಿಂಗ್ನಲ್ಲಿ ಪ್ರಥಮ ಸ್ಥಾನ, ತೃತೀಯ ಬಿ.ಕಾಂ. ಮನೀಷ್ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಹಾಗೂ ದ್ವಿತೀಯ ಬಿ.ಕಾಂ. ವಿನಾಯಕ ಫೋಟೋಗ್ರಾಫಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ದ್ವಿತೀಯ ಸಮಗ್ರ ಪುರಸ್ಕಾರವನ್ನು ಪಡೆದುಕೊಂಡಿದ್ದು, ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Exit mobile version