ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜ.03: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್-02, ತ್ರಾಸಿ-ಮರವಂತೆ ಬೀಚ್ 03, ಆಸರೆ ಬೀಚ್ 02, ಮಲ್ಪೆ ಬೀಚ್ 04, ಸೈಂಟ್ ಮೇರೀಸ್ ಐಲ್ಯಾಂಡ್-03, ಕಾಪು ಬೀಚ್ 02, ಪಡುಬಿದ್ರಿ ಮುಖ್ಯ ಬೀಚ್ 02 ಹಾಗೂ ಕುಂದಾಪುರ ಕೋಡಿ ಬೀಚ್-02 ಗಳಲ್ಲಿ ಒಟ್ಟು 20 ಜೀವ ರಕ್ಷಕ ಸಿಬ್ಬಂದಿಗಳಿಗೆ ಇಲಾಖೆಯ ವತಿಯಿಂದ ಜೀವ ರಕ್ಷಕ ತರಬೇತಿ ನೀಡಿ ಮುಂದಿನ ದಿನಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗಾವಕಾಶ ಕಲ್ಪಿಸಲಾಗುವುದು.
ತರಬೇತಿಯಲ್ಲಿ ಭಾಗವಹಿಸುವ ಮುಂಚಿತವಾಗಿ ಆಯ್ಕೆ ಪ್ರಕ್ರಿಯೆಯು ಜನವರಿ 8 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯ ಒಳಗೆ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಈಜುಕೊಳ ಇಲ್ಲಿ ನಡೆಯಲಿದ್ದು, 18 ರಿಂದ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾದೊಂದಿಗೆ ಹಾಜರಾಗಿ ನೊಂದಾಯಿಸಿಕೊAಡು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್ ಎರಡನೇ ಮಹಡಿ, ಕೊಠಡಿ ಸಂಖ್ಯೆ 303, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868, ಅನ್ನು ಕಛೇರಿ ವೇಳೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.