Site icon Kundapra.com ಕುಂದಾಪ್ರ ಡಾಟ್ ಕಾಂ

ನಿಂತಿದ್ದ ಲಾರಿಗೆ ಕಾರಿ ಡಿಕ್ಕಿಯಾಗಿ ಮಹಿಳೆ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಒತ್ತಿನೆಣೆ ರಾಷ್ಟ್ರೀಯ ಹೆದ್ದಾರಿ 66ರ ಪಶ್ಚಿಮ ಬದಿಯ ರಸ್ತೆಯ ಅಂಚಿನಲ್ಲಿ ನಿಂತಿದ್ದ ಲಾರಿಗೆ ಭಟ್ಕಳ ಕಡೆಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿಯಾಗಿ ಸಹಪ್ರಯಾಣ ಮಾಡುತ್ತಿದ್ದ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ.

ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಮಾರುತಿ ಸ್ವಿಪ್ಟ್ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಚಾಲಕ ಹೇಮಂತ್ ಎಂಬುವವರು ತೀರಾ ಎಡ ಬದಿಗೆ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿತ್ತು. ಪರಿಣಾಮ ಕಾರಿನಲ್ಲಿ ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಲಾವಣ್ಯ ಎಂಬುವವರಿಗೆ ತಲೆಗೆ ಗಂಭೀರ ಸ್ವರೂಪದದ ರಕ್ತಗಾಯವಾಗಿ ಪ್ರಜ್ಞೆ ತಪ್ಪಿದ್ದು ಕಾರಿನ ಚಾಲಕ ಹೇಮಂತನಿಗೆ ಸಣ್ಣಪುಟ್ಟ ತರಚಿದ ಗಾಯಗಳಾಗಿತ್ತು.

ಗಾಯಾಳು ಲಾವಣ್ಯ ಅವರನ್ನುತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರತ್ತದೆ.

Exit mobile version